ತಿರುವನಂತಪುರಂ: ಇತ್ತೀಚೆಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮೋಕ್ರಟಿಕ್ ಫ್ರಂಟ್ (UDF) ಭರ್ಜರಿ ಬಹುಮತದೊಂದಿಗೆ ವಿಜಯಮಾಲೆ ತೊಟ್ಟಿದ್ದರೂ, ಮುಖ್ಯಮಂತ್ರಿ ಗಾದಿಯ(Next Kerala CM) ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲದ ಮೋಡಗಳು ಕವಿದಿವೆ. 140 ಸ್ಥಾನಗಳ ಪೈಕಿ ಯುಡಿಎಫ್ 102 ಸ್ಥಾನಗಳನ್ನು ಗೆದ್ದು ಬೀಗಿದೆ, ಆದರೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಮಾತ್ರ ಹೈಕಮಾಂಡ್‌ನಿಂದ ಇನ್ನೂ ಉತ್ತರ ಸಿಕ್ಕಿಲ್ಲ.