ನವದೆಹಲಿ: ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಸದನದಲ್ಲಿ ಸೋಲನುಭವಿಸಿದ ಬೆನ್ನಲ್ಲೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ( Om Birla) ಅವರು ಗುರುವಾರ ಸಂಸತ್ತಿನ ಕಲಾಪಕ್ಕೆ ಮರಳಿದ್ದಾರೆ. ಈ ವೇಳೆ ಭಾವನಾತ್ಮಕವಾಗಿ ಮಾತನಾಡಿದ ಅವರು, ತಮ್ಮ ಮೇಲಿನ ಪಕ್ಷಪಾತದ ಆರೋಪಗಳನ್ನು ತಳ್ಳಿಹಾಕಿದ್ದಲ್ಲದೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.