ಅಬಕಾರಿ ಹಗರಣ ಪ್ರಕರಣ; ಮಮತಾ ಬ್ಯಾನರ್ಜಿಯಂತೆ ಇಂದು ಸ್ವತಃ ಹೈಕೋರ್ಟ್ನಲ್ಲಿ ವಾದ ಮಂಡಿಸಲಿರುವ ಮಾಜಿ ಸಿಎಂ ಕೇಜ್ರಿವಾಲ್ | Ex CM Kejriwal
ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್
Published on:
Copied
Follow Us
ನವದೆಹಲಿ: ಪಶ್ಚಿಮ ಬಂಗಾಳದಲ್ಲಿನ ಎಸ್ಐಆರ್ ಪ್ರಕ್ರಿಯೆ ವಿರೋಧಿಸಿ ಸುಪ್ರೀಂಕೋರ್ಟ್ನಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಾದ ಮಂಡಿಸಿದಂತೆ, ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್(Aravind Kejriwal) ಇಂದು(ಏ. 06) ಹೈಕೋರ್ಟ್ ಮುಂದೆ ಖುದ್ದು ಹಾಜರಾಗಿ ಸ್ವತಃ ವಾದ ಮಂಡಿಸಲಿದ್ದಾರೆ ಎಂದು ಆಪ್ ತಿಳಿಸಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ತನ್ನ ವಿರುದ್ಧ ಮಾಡಿದ ಅನಗತ್ಯ ಟೀಕೆಗಳನ್ನು ತೆಗೆದುಹಾಕುವಂತೆ ಕೋರಿ ಜಾರಿ ನಿರ್ದೇಶನಾಲಯ(ED) ಸಲ್ಲಿಸಿದ ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದ್ದು, ಇಂದು ವಿಚಾರಣೆ ಮುಂದುವರೆಸಲಿದೆ.
ಈ ನಡುವೆ ಪ್ರಕರಣದ ವಿಚಾರಣೆಯಿಂದ ನ್ಯಾ. ಸ್ವರ್ಣಕಾಂತ ಶರ್ಮಾ ಅವರನ್ನು ಹಿಂದೆ ಸರಿಸುವಂತೆ ಅಥವಾ ಅವರ ಪೀಠದಿಂದ ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾವಯಿಸುವಂತೆ ಅರವಿಂದ್ ಕೇಜ್ರಿವಾಲ್ ಮತ್ತು ಇತರೆ ಆರೋಪಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು ಮತ್ತು ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಮನವಿಯನ್ನು ತಿರಸ್ಕರಿಸಿದೆ.
ಇನ್ನೂ ಅಬಕಾರಿ ನೀತಿ ಪ್ರಕರಣದ ತನಿಖೆಯ ಸಮಯದಲ್ಲಿ ಸಮನ್ಸ್ ಪಾಲಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಸಹ ಇಡಿ ಅರ್ಜಿಯಲ್ಲಿ ಪ್ರಶ್ನಿಸಿದೆ.
ಫೆ. 27ರಂದು ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದ ದೆಹಲಿ ವಿಶೇಷ ನ್ಯಾಯಾಲಯವು, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal Case), ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 21 ಜನರನ್ನು ಖುಲಾಸೆಗೊಳಿಸಿತ್ತು.
ಸಿಬಿಐ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ಸಾಬೀತುಪಡಿಸಲು ಅಗತ್ಯವಿರುವ ಭದ್ರವಾದ ಸಾಕ್ಷ್ಯಗಳ ಕೊರತೆಯಿದೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಲಯ, ಹಣದ ವರ್ಗಾವಣೆ ಅಥವಾ ಕಿಕ್‌ಬ್ಯಾಕ್ ಪಡೆದಿದ್ದಾರೆ ಎನ್ನಲು ಯಾವುದೇ ನೇರ ಪುರಾವೆಗಳಿಲ್ಲ. ಕೇವಲ ಊಹಾಪೋಹಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ನಡೆಸಲು ಸಾಧ್ಯವಿಲ್ಲ ಸಿಬಿಐ ಅಧಿಕಾರಿಗಳನ್ನು ತರಾಟಗೆ ತೆಗೆದುಕೊಂಡಿತ್ತು (ಏಜೆನ್ಸೀಸ್).