ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ನಲ್ಲಿ (TMC) ಭಾರಿ ಬಿರುಕು ಉಂಟಾಗಿದ್ದು, 20 ಸಂಸದರು ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟಕ್ಕೆ ಬೆಂಬಲ ನೀಡಲಿದ್ದಾರೆ ಎಂಬ ವರದಿಗಳನ್ನು ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ವರದಿಗಳು ಕೇವಲ ವದಂತಿಗಳಾಗಿದ್ದು, ವೈರಲ್ ಆಗಿರುವ ಸಂಸದರ ಪಟ್ಟಿ ನಕಲಿ (Fake) ಎಂದು ಟಿಎಂಸಿ ನಾಯಕರು ಹೇಳಿದ್ದಾರೆ. ಅಲ್ಲದೆ, ರಾಜಕೀಯ ವಿರೋಧಿಗಳು ಮತ್ತು ಬಿಜೆಪಿ ಇದರ ಹಿಂದೆ ಇದ್ದು, ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.