ಭೀಕರ ಅಪಘಾತ: ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಆರು ಮಂದಿ ಸ್ಥಳದಲ್ಲೇ ಸಾವು, 21 ಜನರಿಗೆ ಗಾಯ | accident
ಘಟನೆಯ ಸ್ಥಳ
Published on:
Copied
Follow Us
ಅಮೃತಸರ: ಪಂಜಾಬ್ನ ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಭೀಕರ ಅಪಘಾತ(Accident) ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು, 21 ಜನ ಗಾಯಗೊಂಡಿದ್ದಾರೆ ಎಂದು ಬುಧವಾರ(ಏ. 15) ವರದಿಯಾಗಿದೆ.
ಬಸ್ಸಿ ಪಠಾಣಾ ಪ್ರದೇಶದ ಮೊರಿಂಡಾ-ಚುನ್ನಿ ರಸ್ತೆಯಲ್ಲಿರುವ ಹಿಮ್ಮತ್‌ಪುರ ಗ್ರಾಮದ ಬಳಿ ಮಂಗಳವಾರ ರಾತ್ರಿ 10:00 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೈಸಾಖಿ ಹಬ್ಬದ ಸಂದರ್ಭದಲ್ಲಿ ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್‌ನಲ್ಲಿ ಭಕ್ತರು ಪೂಜೆ ಸಲ್ಲಿಸಿ ವಾಪಾಸ್ ಆಗುವಾಗ ಈ ದುರ್ಘಟನೆ ನಡೆದಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಮೇಲಕ್ಕೆತ್ತಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಎಲ್ಲಾ ಪ್ರಯಾಣಿಕರು ಫತೇಘರ್ ಸಾಹಿಬ್‌ನ ಮೈನ್ ಮಜ್ರಿ ಗ್ರಾಮದ ನಿವಾಸಿಗಳು. ಅತಿ ವೇಗದಿಂದ ನಿಯಂತ್ರಣ ತಪ್ಪಿ ಬಸ್ ರಸ್ತೆ ಬಿಟ್ಟು ಪಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಇಪ್ಪತ್ತೊಂದು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).