ಭೀಕರ ಅಪಘಾತ: ಟ್ರ್ಯಾಕ್ಟರ್ ಪಲ್ಟಿಯಾಗಿ ಆರು ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ | Accident

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಭೋಪಾಲ್: ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ಭೀಕರ ಅಪಘಾತ(Accident) ಸಂಭವಿಸಿದ್ದು, 50 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಆರು ಮಂದಿ ಮೃತಪಟ್ಟಿದ್ದು, ನಲವತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಶನಿವಾರ(ಮೇ 30) ವರದಿಯಾಗಿದೆ.
ಅನುಪ್ಪುರ್ ಜಿಲ್ಲೆಯ ಗಿಂಜ್ರಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಘಟನೆ ನಡೆದಿದೆ. ಪಡಾನಿಯಾ ಗ್ರಾಮದ 50 ಕ್ಕೂ ಹೆಚ್ಚು ಸ್ಥಳೀಯರು ಧಾರ್ಮಿಕ ಕಾರ್ಯಕ್ರಮಕ್ಕಾಗಿ ಟ್ರ್ಯಾಕ್ಟರ್‌ನಲ್ಲಿ ಬಿಜೋರಾ ಗ್ರಾಮಕ್ಕೆ ತೆರಳಿದ್ದರು ಎನ್ನಲಾಗಿದೆ. ಟ್ರ್ಯಾಕ್ಟರ್ ಗಿಂಜ್ರಿ ಗ್ರಾಮವನ್ನು ತಲುಪುತ್ತಿದ್ದಂತೆ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಈ ವೇಳೆ ಟ್ರ್ಯಾಕ್ಟರ್‌ನಲ್ಲಿದ್ದ ಎಲ್ಲಾ ಜನರು ಟ್ರಾಲಿಯ ಕೆಳಗೆ ಸಿಲುಕಿಕೊಂಡಿದ್ದಾರೆ. ತಕ್ಷಣ ಮಾಹಿತಿ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಜನರನ್ನು ಹೊರತೆಗೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯದಿದ್ದಾರೆ. ಈ ವೇಳೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 15 ಜನರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಗಳ ನೆರವು ಘೋಷಿಸಿದ್ದಾರೆ. ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net