ಭೀಕರ ರಸ್ತೆ ಅಪಘಾತ; ಟ್ರಕ್​ಗೆ ಡಿಕ್ಕಿ ಹೊಡೆದ ಬಸ್​; ಆರು ಜನ ಸ್ಥಳದಲ್ಲೇ ಸಾವು | accident

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ಲಖನೌ: ಉತ್ತರ ಪ್ರದೇಶದ ಹಾಪುರದಲ್ಲಿ ಭೀಕರ ಅಪಘಾತ(accident) ಸಂಭವಿಸಿದ್ದು, ಬಸ್​ಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸ್ಥಳದಲ್ಲೇ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಾಪುರದ ಧೌಲಾನಾ-ಗುಲಾವತಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬಸ್​ನಲ್ಲಿ ಒಟ್ಟು 12 ಜನರಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್ ಹಾಪುರದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಹಾಪುರ ಎಸ್​ಪಿ ಜ್ಞಾನಮಜಯ್, ಬಸ್​ನಲ್ಲಿದ್ದ 12 ಜನ ಪೈಕಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯರೊಂದಿಗೆ ಸೇರಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶವಗಳನ್ನು ಗುರುತಿಸಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net