ಈ ಕುರಿತು ಮಾತನಾಡಿರುವ ಚಂಬಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಶರ್ಮಾ, ಆರೋಪಿ ತಂದೆ ನೀಡಿದ ಮಾಹಿತಿ ಮೇರೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಮಗುವಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದಾಗ್ಯೂ ಪ್ರವಾಹ ಮತ್ತು ನೀರಿನ ಮಟ್ಟ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಇನ್ನೂ ಮಗು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.