ಫೆಡರೇಶನ್ ಆಫ್ ಇಂಡಿಯನ್ ಏರ್‌ಲೈನ್ಸ್ (FIA), ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಉದ್ಯಮವು 'ತೀವ್ರ ಒತ್ತಡ'ದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದೆ. ಕಳೆದ ಕೆಲವು ವರ್ಷಗಳಿಂದ ಸತತವಾಗಿ ಏರುತ್ತಿರುವ ಇಂಧನ ಬೆಲೆ, ಕಾರ್ಯಾಚರಣಾ ವೆಚ್ಚ ಮತ್ತು ಆರ್ಥಿಕ ಹಿಂಜರಿತದ ಪರಿಣಾಮವಾಗಿ ಸಂಸ್ಥೆಗಳು ಲಾಭ ಗಳಿಸುವುದು ಹಾಗಿರಲಿ, ಅಸ್ತಿತ್ವ ಉಳಿಸಿಕೊಳ್ಳುವುದೇ ಕಷ್ಟವಾಗಿದೆ ಎಂದು ವಿವರಿಸಿದೆ.