ಈ ಕುರಿತು ಮಾತನಾಡಿರುವ ಎಸ್ಪಿ ಸುಚಿತ್ರಾ ಕುಮಾರಿ, ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ನಡೆದಿರಬಹುದು. ಬೆಂಕಿಯು ಕಟ್ಟಡದ ಮೂರನೇ ಮಹಡಿಯನ್ನು ಆವರಿಸಿದೆ. ಈ ವೇಳೆ ನಿವಾಸಿಗಳು ಮಲಗಿದ್ದರು. ಐವರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ತಕ್ಷಣ ಅಗ್ನಿಶಾಮಕದಳ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಲಾಗಿದೆ ಎಂದು ಹೇಳಿದ್ದಾರೆ.