

ಪೇಶಾವರ: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಾನುವಾರ ನಡೆದ ಶಾಂತಿ ರ‍್ಯಾಲಿಯನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ಭೀಕರ ಆತ್ಮಹುತಿ ಬಾಂಬ್ ದಾಳಿಯಲ್ಲಿ (Terror Attack) ಐವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಜನರು ಮೃತಪಟ್ಟಿದ್ದು, ಘಟನೆಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.