ಈ ಅವಧಿಯಲ್ಲಿ ರದ್ದತಿ ಅಥವಾ ಮರುಹೊಂದಿಸುವಿಕೆಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಪ್ರಯಾಣಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು, ವಿಮಾನ ನಿಲ್ದಾಣಗಳಲ್ಲಿ ಆಹಾರ ಮತ್ತು ತಿಂಡಿಗಳ ಜೊತೆಗೆ ಸಾವಿರಾರು ಹೋಟೆಲ್ ಕೊಠಡಿಗಳು ಮತ್ತು ಮೇಲ್ಮೈ ಸಾರಿಗೆ ಆಯ್ಕೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಇಷ್ಟೇ ಅಲ್ಲದೇ, ಸಾಧ್ಯವಾದಲ್ಲೆಲ್ಲಾ ಹಿರಿಯ ನಾಗರಿಕರಿಗೆ ವಿಶ್ರಾಂತಿ ಕೊಠಡಿ ಪ್ರವೇಶವನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ.