ದೆಹಲಿಯಲ್ಲಿ ಮನೆಗೆ ನುಗ್ಗಿ ತಂದೆ-ಮಕ್ಕಳು ಸೇರಿ ನಾಲ್ವರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಓರ್ವ ಸಾವು | shot

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ನವದೆಹಲಿ: ದೆಹಲಿಯ ಬವಾನಾ ಪ್ರದೇಶದಲ್ಲಿ ಇಂದು(ಮಾ. 19) ಮನೆಯೊಂದಕ್ಕೆ ನುಗ್ಗಿದ ಮೂವರು ದುಷ್ಕರ್ಮಿಗಳು ತಂದೆ-ಮಕ್ಕಳು ಸೇರಿ ನಾಲ್ವರ ಮೇಲೆ ಗುಂಡು ಹಾರಿಸಿದ್ದು(shot), ಘಟನೆಯಲ್ಲಿ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮೂವರು ಅಪರಿಚಿತ ದುಷ್ಕರ್ಮಿಗಳು ಮೋಟಾರ್ ಸೈಕಲ್‌ನಲ್ಲಿ ಬಂದು ಬಲವಂತವಾಗಿ ಮನೆಗೆ ನುಗ್ಗಿ, ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ದಾಳಿಯನ್ನು ಪೊಲೀಸರು ಗ್ಯಾಂಗ್​ವಾರ್ ಎಂದು ಶಂಕಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನನ್ನು ರವಿ(28) ಎಂದು ಗುರುತಿಸಲಾಗಿದೆ. 10 ವರ್ಷದ ಮಗುವಿನ ಕಾಲಿಗೆ ಗುಂಡೇಟಿನಿಂದ ಗಾಯವಾಗಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ತಂದೆ ಸೇರಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಈ ದಾಳಿಯಲ್ಲಿ ಟಿಲ್ಲು ಗ್ಯಾಂಗ್‌ನ ಒಳಗೊಳ್ಳುವಿಕೆಯನ್ನು ಸೂಚಿಸುತ್ತವೆ, ಆದರೂ ಅಧಿಕಾರಿಗಳು ಈ ಕೋನವನ್ನು ಇನ್ನೂ ದೃಢಪಡಿಸಿಲ್ಲ. ಈ ಕೋನದಲ್ಲೂ ಈ ಪೊಲೀಸರು ತನಿಖೆ ಆರಂಭಿಸಿದ್ದು, ದಾಳಿಕೋರರನ್ನು ಗುರುತಿಸಲು ಮತ್ತು ಬಂಧಿಸಲು ಬಲೆ ಬೀಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net