ರಾಜಕೀಯ ವಿಶ್ಲೇಷಕರ ಪ್ರಕಾರ, ಏಕನಾಥ್ ಶಿಂಧೆ ಮತ್ತು ಅವರ ಪುತ್ರ, ಲೋಕಸಭಾ ಸಂಸದ ಡಾ. ಶ್ರೀಕಾಂತ್ ಶಿಂಧೆ, ಕಳೆದ ಆರು ತಿಂಗಳಿನಿಂದ ಉದ್ಧವ್ ಬಣದ ಹಲವು ಸಂಸದರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಅವಧಿಯಲ್ಲಿ ದೆಹಲಿಯಲ್ಲಿ ವೈಯಕ್ತಿಕ ಹಾಗೂ ಸಾಮೂಹಿಕವಾಗಿ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಕೇಂದ್ರ ಸಚಿವ ಪ್ರತಾಪರಾವ್ ಜಾಧವ್ ಅವರ ದೆಹಲಿ ನಿವಾಸದಲ್ಲಿ ನಡೆದ ಸಭೆಗಳಲ್ಲೂ ಠಾಕ್ರೆ ಪಾಳಯದ ಸಂಸದರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಶಿವಸೇನಾ (UBT) ಹೊಂದಿರುವ ಒಂಬತ್ತು ಲೋಕಸಭಾ ಸಂಸದರ ಪೈಕಿ, ಮುಂಬೈನ ಇಬ್ಬರು ಸಂಸದರನ್ನು ಹೊರತುಪಡಿಸಿ ಉಳಿದ ಏಳು ಸಂಸದರು ಶಿಂಧೆ ಬಣದೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಇತ್ತೀಚೆಗೆ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಲಾಗುತ್ತಿದೆ.