ಕೇರಳ: ಪ್ರಸ್ತುತ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇಸ್ರೇಲ್-ಇರಾನ್ ನಡುವಿನ ಭೀಕರ ಯುದ್ಧದಿಂದ ತೈಲ ಬಿಕ್ಕಟ್ಟು ಎದುರಾಗಿದೆ. ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಇರಾನ್, ವೈರಿ ರಾಷ್ಟ್ರದ ಮಿತ್ರ ದೇಶಗಳನ್ನು ಬಿಟ್ಟು ಉಳಿದ ರಾಷ್ಟ್ರಗಳ ತೈಲ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಸದ್ಯ ಭಾರತದಲ್ಲಿ, ಗೃಹಬಳಕೆ ಮತ್ತು ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಎದುರಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಈ ನಿಟ್ಟಿನಲ್ಲಿ, ಗ್ಯಾಸ್ ಸಿಲಿಂಡರ್ಗಳಿಗೆ ಸಖತ್ ಬೇಡಿಕೆ ಸೃಷ್ಟಿಯಾಗಿದೆ.