ಗೋವಾ ಅಗ್ನಿ ದುರಂತ; ಸ್ಥಳಕ್ಕೆ ಸಿಎಂ ಸಾವಂತ್ ಭೇಟಿ, ಪರಿಶೀಲನೆ; ಮೃತರಿಗೆ ಪ್ರಧಾನಿ, ರಾಷ್ಟ್ರಪತಿ ಸಂತಾಪ | Fire tragedy

ಎಂ ಪ್ರಮೋದ್ ಸಾವಂತ್
ಎಂ ಪ್ರಮೋದ್ ಸಾವಂತ್
Published on
Fire tragedy: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಜನಪ್ರಿಯ ನೈಟ್‌ಕ್ಲಬ್​ನಲ್ಲಿ ಮಧ್ಯರಾತ್ರಿ ನಡೆದ ಅಗ್ನಿ ದುರಂತದಲ್ಲಿ 23 ಮಂದಿ ಸಜೀವದಹನವಾಗಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಸಿಎಂ ಪ್ರಮೋದ್ ಸಾವಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಾವಂತ್, ಗೋವಾದಂತಹ ಪ್ರವಾಸೋದ್ಯಮ ರಾಜ್ಯಕ್ಕೆ ಈ ಘಟನೆ ತುಂಬಾ ದುರದೃಷ್ಟಕರ. ಅಕ್ರಮವಾಗಿ ನಡೆಸುವ ಕ್ಲಬ್​ನಲ್ಲಿ ಘಟನೆ ನಡೆದಿದೆ.​ 23 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಈ ಘಟನೆಯ ಬಗ್ಗೆ ತನಿಖೆ ನಡೆಸಲಿದೆ. ಬೆಂಕಿಯ ನಿಖರವಾದ ಕಾರಣವನ್ನು ತನಿಖೆ ಪರಿಶೀಲಿಸುತ್ತದೆ. ಇದಕ್ಕೆ ಕಾರಣರಾದವರು ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.
ದುರಂತದಲ್ಲಿ ಮೃತಪಟ್ಟವರಿಗೆ ಎಕ್ಸ್​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದು, ಉತ್ತರ ಗೋವಾ ಜಿಲ್ಲೆಯಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡ ದುರಂತ ಬೆಂಕಿಯ ಘಟನೆಯಿಂದ ತೀವ್ರ ನೋವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ಅವರು ಶಕ್ತಿ ಪಡೆಯಲಿ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಇನ್ನೂ ಅಗ್ನಿ ದುರಂತದ ಬಗ್ಗೆ ಎಕ್ಸ್​ನಲ್ಲಿ ತೀವ್ರ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಪರಿಸ್ಥಿತಿಯ ಬಗ್ಗೆ ಗೋವಾ ಸಿಎಂ ಡಾ. ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.
ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ಕಚೇರಿಯು, ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net