370ನೇ ವಿಧಿಯ ಅಡಿ ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ(ವಿಧಾನಸೌಧದೊಂದಿಗೆ) ಮತ್ತು ಲಡಾಖ್(ವಿಧಾನಸೌಧವಿಲ್ಲದೆ) ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಲಾಗಿತ್ತು. ಅದಾದ ಬಳಿಕ ಪ್ರಧಾನಿ ಮೋದಿ, ಅಮಿತ್ ಶಾ ಮತ್ತೆ ಜಮ್ಮು-ಕಾಶ್ಮೀರಕ್ಕೆ ರಾಜ್ಯಸ್ಥಾನಮಾನ ನೀಡುವ ಭರವಸೆ ನೀಡಿದ್ದರು.