ಪ್ರಸ್ತುತ ದೇಶದಲ್ಲಿ ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕವಿದೆ. ಆದರೆ ರಾಜಸ್ಥಾನ ಪೊಲೀಸರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, "ರಾಜ್ಯದಲ್ಲಿ ಮನೆಬಳಕೆಯ ಸಿಲಿಂಡರ್‌ಗಳ ಕೊರತೆ ಇಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ," ಎಂದು ತಿಳಿಸಿದ್ದಾರೆ. ಗ್ಯಾಸ್ ಕೊರತೆ ಇಲ್ಲದಿದ್ದರೂ, ಅಪರಾಧ ಎಸಗುವವರಿಗೆ ಶಿಕ್ಷೆಯ ರೂಪದಲ್ಲಿ ಈ ಕಡಿತವನ್ನು ಜಾರಿಗೆ ತರಲಾಗುತ್ತಿದೆ ಎಂಬುದು ಇಲ್ಲಿ ಗಮನಾರ್ಹ.