ಸಿಜೆಪಿ ಪಕ್ಷದ ಜತೆ ಪ್ರತಿಭಟನೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಪೆಲೆಟ್ ಗನ್ ಬಳಕೆ ಮತ್ತು ಪೊಲೀಸ್ ದಾಳಿಯ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. ಈ ಘಟನೆಯ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಷ್ ನೋಟಿಸ್ ಕಳುಹಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ಘಟನೆಯ ಜವಾಬ್ದಾರಿಯನ್ನು ವಹಿಸಿಕೊಂಡು ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.