Kiren Rijiju| SIR, ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ಕೈಗೆತ್ತಿಕೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ: ಕಿರಣ್ ರಿಜಿಜು
Kiren Rijiju | ನವದೆಹಲಿಯಲ್ಲಿ ನಡೆದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ರಾಜ್ಯಸಭೆಯಲ್ಲಿ ಮಾತನಾಡುತ್ತಿದ್ದಾರೆ
Published on:
Copied
Follow Us
ನವದೆಹಲಿ: ಎಸ್‌ಐಆರ್ ಮತ್ತು ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು(Kiren Rijiju) ಸೋಮವಾರ (ಡಿ.1) ಪ್ರತಿಪಾದಿಸಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳು ಸಮಯಮಿತಿಯನ್ನು ನಿಗದಿಪಡಿಸಲು ಒತ್ತಾಯಿಸಬಾರದು ಎಂದಿದ್ದಾರೆ.
ಈ ಬಗ್ಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಚುನಾವಣಾ ಸುಧಾರಣೆಗಳ ಕುರಿತು ಸದನದಲ್ಲಿ ವಿಪಕ್ಷಗಳ ಎತ್ತಿದ ಪ್ರಶ್ನೆಗೆ ಉತ್ತರಿಸಿದ ರಿಜಿಜು, ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ಅಥವಾ ವ್ಯವಹಾರ ಸಲಹಾ ಸಮಿತಿಯಲ್ಲಿ (ಬಿಎಸಿ) ವಿರೋಧ ಪಕ್ಷವು ಹೊರತಂದ ಯಾವುದೇ ವಿಷಯವನ್ನು ಯಾರೂ ದುರ್ಬಲಗೊಳಿಸುತ್ತಿಲ್ಲ. ಅಲ್ಲದೆ, ನಾನು ಹೇಳುತ್ತಿರುವುದು, ಅದು ಸರ್ಕಾರದ ಪರಿಗಣನೆಯಲ್ಲಿದೆ ಎಂದಿದ್ದಾರೆ.
ಇಂದು ಎಸ್‌ಐಆರ್ ಕೈಗೆತ್ತಿಕೊಳ್ಳಬೇಕು ಎಂಬ ಷರತ್ತನ್ನು ನೀವು ಹಾಕಿದರೆ, ಅದು ಕಷ್ಟಕರವಾಗುತ್ತದೆ. ಏಕೆಂದರೆ ನೀವು ನಿರ್ದಿಷ್ಟ ಜಾಗವನ್ನು ನೀಡಬೇಕಾಗುತ್ತದೆ ಎಂದಿದ್ದಾರೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ, ನೀವು ಅದನ್ನು ಏನೇ ಕರೆದರೂ, ವಿಶೇಷ ತೀವ್ರ ಪರಿಷ್ಕರಣೆ ಅಥವಾ ಚುನಾವಣಾ ಸುಧಾರಣೆಗಳು ಅಥವಾ ಯಾವುದೇ ವಿಷಯಕ್ಕೆ ಸಂಬಂಧಿಸಿದ ವಿಷಯವಾಗಿದ್ದರು. ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲೇ ನಾನು ಹೇಳಿದ್ದೇನೆ. ಕೇಂದ್ರ ಸರ್ಕಾರವು ಯಾವುದೇ ವಿಷಯದ ಬಗ್ಗೆ ಚರ್ಚೆಯನ್ನು ಕೈಗೆತ್ತಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ರಿಜಿಜು ಸ್ಪಷ್ಟಪಡಿಸಿದ್ದಾರೆ.
ಮುಂದುವರೆದು ಮಾತನಾಡಿದ ರಿಜಿಜು, ದಯವಿಟ್ಟು ನಮಗೆ ಸ್ವಲ್ಪ ಸಮಯ ನೀಡಿ, ಆದರೆ ಪಟ್ಟಿ ಮಾಡಲಾದ ಇತರ ವ್ಯವಹಾರಗಳನ್ನು ಕೈಗೆತ್ತಿಕೊಳ್ಳಬಹುದು. ನೀವು ಮಂಡಿಸಿರುವ ಬೇಡಿಕೆಯನ್ನು ತಿರಸ್ಕರಿಸಲಾಗಿಲ್ಲ. ಆದ್ದರಿಂದ, ಸರ್ಕಾರ ಯಾವುದೇ ವಿಷಯವನ್ನು ಚರ್ಚಿಸಲು ಸಿದ್ಧವಾಗಿಲ್ಲ ಎಂದು ಭಾವಿಸಬೇಡಿ. ಅಲ್ಲದೆ, ದಯವಿಟ್ಟು ಸಮಯದ ಮೇಲೆ ಯಾವುದೇ ಷರತ್ತು ವಿಧಿಸಬೇಡಿ ಎಂದಿದ್ದಾರೆ.
ಭಾರತದ ಚುನಾವಣಾ ಆಯೋಗ (ಇಸಿಐ) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಘೋಷಿಸಿತ್ತು.
ಇವುಗಳಲ್ಲಿ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳಗಳು 2026 ರಲ್ಲಿ ಚುನಾವಣೆಗೆ ನಡಲಿವೆ. 2026 ರಲ್ಲಿ ಚುನಾವಣೆಗಳು ನಡೆಯಲಿರುವ ಅಸ್ಸಾಂನಲ್ಲಿ, ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪ್ರತ್ಯೇಕವಾಗಿ ಘೋಷಿಸಲಾಯಿತು. ಇದನ್ನು ವಿಶೇಷ ಪರಿಷ್ಕರಣೆ ಎಂದು ಕರೆಯಲಾಗುತ್ತಿದೆ,(ಏಜೆನ್ಸೀಸ್).