ಇನ್ನೂ ಎರಡರಿಂದ ಮೂರು ಉಗ್ರರ ಗುಂಪು ಸುತ್ತುವರಿದ ಪ್ರದೇಶದಲ್ಲಿ ಸಿಲುಕಿಕೊಂಡಿದೆ ಎಂದು ಭದ್ರತಾ ಪಡೆಗಳಿಗೆ ಮಾಹಿತಿ ಬಂದ ಹಿನ್ನೆಲೆ, ಕಾರ್ಯಚರಣೆಯನ್ನು ಬಿಗಿಗೊಳಿಸಲು ಹೆಚ್ಚುವರಿ ಪಡೆಗಳನ್ನು ಗ್ರಾಮದಲ್ಲಿ ನಿಯೋಜಿಸಲಾಗಿದ್ದು, ಭದ್ರತಾ ಸಿಬ್ಬಂದಿ ವೈಮಾನಿಕ ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಬಳಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ (ಏಜೆನ್ಸೀಸ್).