ಸುಕ್ಮಾದಲ್ಲಿ ಗುಂಡಿನ ಚಕಮಕಿ; 12ಕ್ಕೂ ಹೆಚ್ಚು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು | Naxals killed

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ರಾಯ್​ಪುರ: ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯ ಕಿಸ್ತಾರಂ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 12ಕ್ಕೂ ಹೆಚ್ಚು ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಶನಿವಾರ(ಜ. 03) ವರದಿಯಾಗಿದೆ. 
ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೇರೆಗೆ ಕಿಸ್ತಾರಂ ಪೊಲೀಸ್ ಠಾಣೆ ವ್ಯಾಪ್ತಿಯ ಪಲೋಡಿ ಮತ್ತು ಪೋಟಕ್ಪಲ್ಲಿ ಪ್ರದೇಶಗಳಲ್ಲಿ ಶುಕ್ರವಾರ ತಡರಾತ್ರಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಪಡೆಗಳು  ನಕ್ಸಲರನ್ನು ಪಾಮ್ಲೂರ್ ಎಂಬ ಗ್ರಾಮದ ಬಳಿ ಪತ್ತೆ ಹಚ್ಚಿದ್ದರು. ಈ ವೇಳೆ ಎರಡೂ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. 
ಈ ವೇಳೆ 12ಕ್ಕೂ ಹೆಚ್ಚು ನಕ್ಸಲರನ್ನು ಹೊಡೆದುರುಳಿಸಿದ್ದು, ಪ್ರಮುಖವಾಗಿ ಕೊಂಟಾ ಪ್ರದೇಶ ಸಮಿತಿಯ ಕಾರ್ಯದರ್ಶು ಮಂಗ್ಡು ಹತ್ಯೆಯಾಗಿದ್ದಾರೆ. ಉಳಿದ ನಕ್ಸಲರ ಗುರುತು ಪತ್ತೆಯಾಗಿಲ್ಲ. ಸ್ಥಳದಿಂದ ಭದ್ರತಾ ಪಡೆಗಳು ಎಕೆ-47 ಮತ್ತು ಐಎನ್‌ಎಸ್‌ಎಎಸ್ ರೈಫಲ್‌ಗಳು ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ಕಾರ್ಯಾಚರಣೆಯನ್ನು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಮೇಲ್ವಿಚಾರಣೆ ಮಾಡ್ತಿದ್ದಾರೆ ಎನ್ನಲಾಗಿದೆ.
ಇಂದು ಮುಂಜಾನೆ ಬಿಜಾಪುರ ಜಿಲ್ಲೆಯ ದಕ್ಷಿಣ ಭಾಗದ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಭದ್ರತಾ ಪಡೆಗಳು ಸ್ಥಳದಿಂದ ಇಬ್ಬರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಂಡಿವೆ. ಕಾರ್ಯಾಚರಣೆ ಮುಂದುವರೆದಿದೆ (ಏಜೆನ್ಸೀಸ್). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net