ಪ್ರತಿಯೊಂದು ಗಲ್ಲಿಯಲ್ಲೂ ಜಂತರ್ ಮಂತರ್: ಎಸ್‌ಐಆರ್ ವಿರೋಧಿ ಹೋರಾಟಕ್ಕೆ ಧುಮುಕಿದ ನಿರ್ಮಲಾ ಸೀತಾರಾಮನ್ ಪತಿ! | Nirmala Sitharaman Husband

Nirmala Sitharaman Husband: ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 23 ರಂದು ದೇಶವ್ಯಾಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಎಸ್‌ಐಆರ್ ವಿರೋಧಿ ಹೋರಾಟಕ್ಕೆ ಧುಮುಕಿದ ನಿರ್ಮಲಾ ಸೀತಾರಾಮನ್ ಪತಿ!
ಎಸ್‌ಐಆರ್ ವಿರೋಧಿ ಹೋರಾಟಕ್ಕೆ ಧುಮುಕಿದ ನಿರ್ಮಲಾ ಸೀತಾರಾಮನ್ ಪತಿ!
Published on: 

Nirmala Sitharaman Husband: ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 23 ರಂದು ದೇಶವ್ಯಾಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.

ನೂತನವಾಗಿ ರೂಪುಗೊಂಡಿರುವ ಪೀಪಲ್ ಅಗೇನ್ಸ್ಟ್ ಎಸ್‌ಐಆರ್ (People Against SIR) ಒಕ್ಕೂಟದ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ, ಪರಕಾಲ ಪ್ರಭಾಕರ್, ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭೀಜಿತ್ ದಿಪ್ಕೆ ಹಾಗೂ ನಟ ಪ್ರಕಾಶ್ ರಾಜ್ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಹರ್ ಗಲ್ಲಿ ಮೇ ಜಂತರ್ ಮಂತರ್! ಅಕ್ಟೋಬರ್ 23 ರಂದು ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಜನರ ಪಾದಯಾತ್ರೆ ನಡೆಯಲಿದೆ ಎಂದು ಪರಕಾಲ ಪ್ರಭಾಕರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಜನರಿಗೆ ಕರೆ ನೀಡಿದ್ದಾರೆ. ಇವರೊಂದಿಗೆ ಹಿರಿಯ ವಕೀಲ ಪ್ರಶಾಂತ್ ಭೂಷಣ್, ರೈತ ನಾಯಕ ರಾಕೇಶ್ ಟಿಕಾಯತ್, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷೆ ನೇಹಾ ಬೋರಾ ಹಾಗೂ ಲೇಖಕ ತುಷಾರ್ ಗಾಂಧಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ನೀವು ಜೆನ್-ಜೀ ಅಲ್ಲ, ನಿಮ್ಮ ಉದ್ದೇಶವೇನು..? ಹೈಕೋರ್ಟ್ ಚಾಟಿ ಬೆನ್ನಲ್ಲೇ ಅರ್ಜಿ ವಾಪಸ್ ಪಡೆದ ರಾಂಕಾ-ದಾಸ್​! | Delhi High Court

ಪರಕಾಲ ಪ್ರಭಾಕರ್ ಹಿನ್ನಲೆ!

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯಾಗಿದ್ದರೂ, ಪರಕಾಲ ಪ್ರಭಾಕರ್ ಅವರು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಕುಸಿತದ ವಿರುದ್ಧ ಸದಾ ಧ್ವನಿ ಎತ್ತುತ್ತಾ ಬಂದಿದ್ದಾರೆ. ತಮ್ಮ ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ ಪುಸ್ತಕದಲ್ಲೂ ಅವರು ನೋಟು ನಿಷೇಧ ಹಾಗೂ ನಿರುದ್ಯೋಗದ ಕುರಿತು ತೀವ್ರವಾಗಿ ಟೀಕಿಸಿದ್ದಾರೆ.

ಆಂಧ್ರಪ್ರದೇಶದ ನರಸಾಪುರದಲ್ಲಿ ಜನಿಸಿದ ಇವರು ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (JNU) ಶಿಕ್ಷಣ ಪಡೆಯುತ್ತಿದ್ದಾಗ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ 1986 ರಲ್ಲಿ ವಿವಾಹವಾದರು. 2014 ರಿಂದ 2018 ರವರೆಗೆ ಆಂಧ್ರಪ್ರದೇಶ ಸರ್ಕಾರದ ಸಂವಹನ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು. ಅಕ್ಟೋಬರ್ 8 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲೂ ಇವರು ಭಾಗವಹಿಸಿದ್ದರು.

Also Read
ಚುನಾವಣಾ ಆಯೋಗದಲ್ಲಿ ಲೆಟರ್​ ವಾರ್​!...ಪ್ರಧಾನಿ ಆಫೀಸ್‌ಗೆ ತಲುಪಿದ ಇಸಿಗಳ ರಹಸ್ಯ ಪತ್ರ; ಆರ್‌ಟಿಐನಲ್ಲಿ ಬಯಲಾಯ್ತು ಅಸಲಿ ಸತ್ಯ! | Election Commission
ಎಸ್‌ಐಆರ್ ವಿರೋಧಿ ಹೋರಾಟಕ್ಕೆ ಧುಮುಕಿದ ನಿರ್ಮಲಾ ಸೀತಾರಾಮನ್ ಪತಿ!

ಎಸ್‌ಐಆರ್ ವಿರುದ್ಧ ಭುಗಿಲೆದ್ದ ಆಕ್ರೋಶ

ಅಕ್ಟೋಬರ್ 14 ರಂದು ವಿದ್ಯಾರ್ಥಿಗಳು, ರೈತರು, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತರ ಒಕ್ಕೂಟವಾಗಿ 'ಪೀಪಲ್ ಅಗೇನ್ಸ್ಟ್ ಎಸ್‌ಐಆರ್ ಅಸ್ತಿತ್ವಕ್ಕೆ ಬಂದಿದೆ. ಈ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ದೇಶಾದ್ಯಂತ ಸುಮಾರು 13 ಕೋಟಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಡಿಲೀಟ್​ ಮಾಡಲಾಗಿದೆ ಎಂದು ಒಕ್ಕೂಟ ಗಂಭೀರ ಆರೋಪ ಮಾಡಿದೆ.

ಹರ್ ಹಾತ್ ಮೇ ತಿರಂಗಾ, ಹರ್ ಗಲ್ಲಿ ಮೇ ಜಂತರ್ ಮಂತರ್ ಎಂಬ ಘೋಷಣೆಯೊಂದಿಗೆ ಪ್ರತಿಯೊಂದು ಪ್ರದೇಶದಲ್ಲೂ ಜಂತರ್ ಮಂತರ್ ಮಾದರಿಯ ಪ್ರತಿಭಟನೆಗಳನ್ನು ನಡೆಸಲು ಒಕ್ಕೂಟ ಮನವಿ ಮಾಡಿದೆ. ದೆಹಲಿ ಪೊಲೀಸರು ಜಂತರ್ ಮಂತರ್ ಪ್ರದೇಶವನ್ನು ಪ್ರತಿಭಟನಾ ಸ್ಥಳ ಪಟ್ಟಿಯಿಂದ ತೆರವುಗೊಳಿಸಿದ ಬೆನ್ನಲ್ಲೇ ಈ ಬೃಹತ್ ಜನಾಂದೋಲನದ ಕರೆ ಬಂದಿರುವುದು ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ(ಏಜೆನ್ಸೀಸ್​).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net