ದೆಹಲಿಯಲ್ಲಿ ಮಳೆ ಅಬ್ಬರ; ಸ್ವಾತಂತ್ರ್ಯ ದಿನದ ಸಂಭ್ರಮಕ್ಕೆ ವರುಣನ ಅಡ್ಡಿ? | Heavy Rain Hits Delhi
ದೆಹಲಿಯಲ್ಲಿ ಮಳೆ ಅಬ್ಬರ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಭಾರೀ ಮಳೆ
ದೆಹಲಿ ಹಲವು ಕಡೆಗಳಲ್ಲಿ ಐಎಂಡಿಯಿಂದ ರೆಡ್ ಅಲರ್ಟ್
ಸ್ವಾತಂತ್ರ್ಯ ದಿನದಂದು ಇರಲಿದೆ ಮೋಡ ಕವಿದ ವಾತಾವರಣ?
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಪೂರ್ವ ಭಾರತದಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆ ಹಾಗೂ ಮುಂಗಾರು ಪ್ರಭಾವದಿಂದ ದೆಹಲಿ ಸುತ್ತಮುತ್ತ ವರುಣನ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.
ಇನ್ನು, ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಹಿನ್ನೆಲೆ ದೆಹಲಿಯ ಹಲವು ಭಾಗಗಳಲ್ಲಿ ಐಎಂಡಿ ರೆಡ್ ಅಲರ್ಟ್ ನೀಡಿದೆ. 24 ಗಂಟೆಗಳಲ್ಲಿ 204 ಮಿ.ಮೀ.ಗಿಂತ ಹೆಚ್ಚು ಮಳೆಯಾದರೆ ಅದನ್ನು ಅತ್ಯಂತ ಭಾರೀ ಮಳೆ ಎಂದು ಪರಿಗಣಿಸಲಾಗುತ್ತದೆ.
ಸ್ವಾತಂತ್ರ್ಯ ದಿನಾಚರಣೆಗೆ ಮಳೆ ಅಡ್ಡಿ?
ಸ್ವಾತಂತ್ರ್ಯ ದಿನಾಚರಣೆಯ ವಾರಾಂತ್ಯದಲ್ಲೂ ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 19ರವರೆಗೆ ಈ ಭಾಗದಲ್ಲಿ ತೇವಾಂಶ ಹೆಚ್ಚಿರುವ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಾರಿ ಶನಿವಾರ ನಡೆಯಲಿರುವ ಸ್ವಾತಂತ್ರ್ಯ ದಿನದಂದು ದೆಹಲಿಯಲ್ಲಿ ಮೋಡ ಮುಸುಕಿದ ವಾತಾವಣ ಇರುವ ಸಾಧ್ಯತೆ ಇದೆ. ಕೆಂಪುಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯುವ ವೇಳೆಯೂ ಭಾಗಶಃ ಮೋಡ ಕವಿದಿರಲಿದ್ದು, ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ,(ಏಜೆನ್ಸೀಸ್).