ಬಸ್ ಟರ್ಮಿನಲ್, ರೈಲು ನಿಲ್ದಾಣ, ಮಾರುಕಟ್ಟೆಗಳು, ಧಾರ್ಮಿಕ ಸ್ಥಳಗಳು, ಪ್ರಮುಖ ಸರ್ಕಾರಿ ಮತ್ತು ಇತರ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳು ಅಥವಾ ಚಟುವಟಿಕೆಗಳನ್ನು ಕಂಡರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.