ಭಾರತದ ಜಿಡಿಪಿ ದತ್ತಾಂಶದ ಬಗ್ಗೆ ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್, ಮಾಜಿ ಹಣಕಾಸು ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ಹಾಗೂ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತೀವ್ರ ಅನುಮಾನ ವ್ಯಕ್ತಪಡಿಸಿದ್ದರು. ದೇಶದಲ್ಲಿ ಇಷ್ಟು ವೇಗವಾಗಿ ಆರ್ಥಿಕತೆ ಬೆಳೆಯುತ್ತಿದ್ದರೆ ಉದ್ಯೋಗಗಳು ಯಾಕೆ ಸೃಷ್ಟಿಯಾಗುತ್ತಿಲ್ಲ? ಎಂದು ಪ್ರಶ್ನಿಸಿದ್ದಲ್ಲದೆ, ಇದು ಮಹಾ ವಿಕೃತ ಚಿತ್ರ ಎಂದು ಟೀಕಿಸಿದ್ದರು.