ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗುವುದು ಐತಿಹಾಸಿಕವಾಗಿ ಅಗತ್ಯ: ತೆಲಂಗಾಣದ ಜನ ಅದಕ್ಕೆ ಬೆಂಬಲವಾಗಿ ನಿಲ್ಲಬೇಕು: ಸಿಎಂ ರೇವಂತ್ ರೆಡ್ಡಿ | Revanth Reddy

ರಾಹುಲ್ ಗಾಂಧಿ ಮತ್ತು ಸಿಎಂ ರೇವಂತ್ ರೆಡ್ಡಿ
ರಾಹುಲ್ ಗಾಂಧಿ ಮತ್ತು ಸಿಎಂ ರೇವಂತ್ ರೆಡ್ಡಿ
Published on
ಹೈದರಾಬಾದ್: ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೇ ಮುಂದಿನ ಪ್ರಧಾನಿಯಾಗಬೇಕೆಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ(Revanth Reddy) ಪ್ರತಿಪಾದಿಸಿದ್ದು, ಅವರು ಪ್ರಧಾನಿಯಾಗುವುದು ದೇಶಕ್ಕೆ ಐತಿಹಾಸಿಕವಾಗಿ ಅಗತ್ಯವಾಗಿದೆ ಎಂದು ಹೇಳಿದ್ದಾರೆ.
ಮೆಡ್ಚಲ್​ ಮಂಡಲ್​ನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, ರಾಹುಲ್ ಗಾಂಧಿಯವರನ್ನು ದೇಶದ ಭವಿಷ್ಯದ ನಾಯಕನನ್ನಾಗಿ ಪ್ರಚಾರ ಮಾಡುವ ನಮ್ಮ ಪ್ರಯತ್ನಗಳನ್ನು ಬೆಂಬಲಿಸುವಂತೆ ತೆಲಂಗಾಣದ ಜನರನ್ನು ಕೋರಿದ್ದಾರೆ.
ತೆಲಂಗಾಣದ ಜನರು ಇದಕ್ಕೆ ಬೆಂಬಲವಾಗಿ ನಿಲ್ಲಬೇಕು. ನಮಗೆ ತೆಲಂಗಾಣ ರಾಜ್ಯ ನೀಡಿದ ಸೋನಿಯಾ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸುವ ಕರ್ತವ್ಯ ನಮಗಿದೆ. ನನ್ನೊಂದಿಗೆ ನಡೆದು 2029 ರಲ್ಲಿ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡೋಣ. ಮತ್ತು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನು ಮಿಡ್ಜಿಲ್ ಮಂಡಲ್ ನಿಂದಲೇ ತೆಗೆದುಕೊಳ್ಳಬೇಕು ಎಂದಿದ್ದಾರೆ.
ರಾಹುಲ್ ಗಾಂಧಿಯವರ ಪ್ರಧಾನಿ ಹುದ್ದೆಯ ಪ್ರಯತ್ನವನ್ನು ಬೆಂಬಲಿಸುವ ಮೂಲಕ ತೆಲಂಗಾಣ ರಾಜ್ಯತ್ವಕ್ಕಾಗಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ 2034ರವರೆಗೆ ಅಧಿಕಾರದಲ್ಲಿ ಇರುತ್ತದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು. ರಾಹುಲ್ ಗಾಂಧಿ ಈ ದೇಶದ ಪ್ರಧಾನಿಯಾಗಬೇಕು. ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ದೇಶದಲ್ಲಿ ಐತಿಹಾಸಿಕ ಅವಶ್ಯಕತೆಯಾಗಿದೆ ಎಂದು ಒತ್ತಿ ಹೇಳಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net