ಭೀಕರ ರಸ್ತೆ ಅಪಘಾತ: ಕೃಷಿ ಹೊಂಡಕ್ಕೆ ಬಿದ್ದ ಪಂಢರಾಪುರಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ವ್ಯಾನ್: 14 ಮಂದಿ ಸಾವು | Accident
ಘಟನೆಯ ಸ್ಥಳ
Published on:
Copied
Follow Us
ಮುಂಬೈ: ಮಹಾರಾಷ್ಟ್ರದ ಪಂಢರಾಪುರ ಬಳಿ ಭಾನುವಾರ(ಜೂ. 14) ಭೀಕರ ರಸ್ತೆ ಅಪಘಾತ(Accident) ಸಂಭವಿಸಿದ್ದು, ಭಕ್ತರನ್ನು ಕರೆದೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದಿದ್ದು, 14 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಭಕ್ತರು ದರ್ಶನಕ್ಕಾಗಿ ಪಂಢರಾಪುರಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.
ಅಪಘಾತದ ಸಮಯದಲ್ಲಿ ವಾಹನದಲ್ಲಿ ಎಷ್ಟು ಜನರಿದ್ದರು ಎಂಬುದು ಇನ್ನೂ ಖಚಿತವಾಗಿಲ್ಲ. ಇನ್ನೂ ಘಟನೆಗೆ ನಿಖರವಾದ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೊಂಡದಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದೆ ಎನ್ನಲಾಗಿದೆ (ಏಜೆನ್ಸೀಸ್).