ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತ; ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್: 7 ಸಾ*, 11 ಮಂದಿಗೆ ಗಾಯ | Himachal Pradesh
ಘಟನೆಯ ಸ್ಥಳ
Published on:
Copied
Follow Us
ಶಿಮ್ಲಾ: ಹಿಮಾಚಲ ಪ್ರದೇಶದ(Himachal Pradesh) ಚಂಬಾ ಜಿಲ್ಲೆಯಲ್ಲಿ ಶನಿವಾರ(ಆ. 08) ಬೆಳಿಗ್ಗೆ 7:15ರ ಸುಮಾರಿಗೆ ಖಾಸಗಿ ಬಸ್ವೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 7 ಮಂದಿ ಮೃತಪಟ್ಟು, 11 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬೈರಾಗಢದಿಂದ ಚಂಬಾಗೆ ಬಸ್ ಪ್ರಯಾಣಿಸುತ್ತಿದ್ದಾಗ ಬೈರಾಗಢ-ಟಿಸ್ಸಾ ರಸ್ತೆಯ ಚಲುಂಜ್ ಮೋರ್(ಕರ್ವ್) ಬಳಿ ಈ ಅಪಘಾತ ಸಂಭವಿಸಿದೆ. ಈ ವೇಳೆ ಬಸ್‌ನಲ್ಲಿ ಸುಮಾರು 20 ರಿಂದ 25 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಘಟನೆ ಬಳಿಕ ಸ್ಥಳೀಯರು ಮತ್ತು ಎನ್‌ಡಿಆರ್‌ಎಫ್, ಪೊಲೀಸರು, ಗೃಹರಕ್ಷಕ ದಳ, ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಒಳಗೊಂಡ ಶೋಧ ಮತ್ತು ರಕ್ಷಣಾ ತಂಡವನ್ನು ಅಪಘಾತದ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ತಕ್ಷಣಕ್ಕೆ ಮೃತ 7 ಮಂದಿ ಗುರುತು ಪತ್ತೆಯಾಗಿಲ್ಲ. 11 ಜನ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಆರು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಂಬಾದ ಪಂಡಿತ್ ಜವಾಹರಲಾಲ್ ನೆಹರು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮಾತನಾಡಿರುವ ಚಂಬಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಕ್ಲಾನಿ, ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).