ತಿರುಪತಿಯಲ್ಲಿ ಭೀಕರ ಬಾಯ್ಲರ್ ಸ್ಫೋಟ: 5 ಮಂದಿ ದುರ್ಮರಣ, 10 ಕ್ಕೂ ಜನರ ಸ್ಥಿತಿ ಗಂಭೀರ; ಮುಂದುವರಿದ ರಕ್ಷಣಾ ಕಾರ್ಯ! Boiler Explosion

ತಿರುಪತಿಯಲ್ಲಿ ಭೀಕರ ಬಾಯ್ಲರ್ ಸ್ಫೋಟಗೊಂಡು 5 ಮಂದಿ ದುರ್ಮರಣ! 10 ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ. ಸ್ಥಳದಲ್ಲಿ ಮುಂದುವರಿದ ರಕ್ಷಣಾ ಕಾರ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ.
Horrific boiler explosion in Tirupati: 5 dead, over 10 in critical condition.
ತಿರುಪತಿಯಲ್ಲಿ ಭೀಕರ ಬಾಯ್ಲರ್ ಸ್ಫೋಟ: 5 ಸಾವು, 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
Published on: 

ತಿರುಪತಿ: ಆಂಧ್ರಪ್ರದೇಶ ರಾಜ್ಯದ ತಿರುಪತಿಯ ಶ್ರೀ ಸಿಟಿಯಲ್ಲಿನ ಔಷಧ ಉತ್ಪಾದನಾ ಘಟಕದಲ್ಲಿ ಬಾಯ್ಲರ್​ವೊಂದು ಸ್ಫೋಟಗೊಂಡ ಪರಿಣಾಮ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಅಧಿಕ ಜನರು ತೀವ್ರವಾಗಿ ಗಾಯಗೊಂಡಿದ್ದಾಗಿ ವರದಿಯಾಗಿದೆ.

ಬಾಯ್ಲರ್​ ಬಹಳ ದೊಡ್ಡ ಮಟ್ಟದಲ್ಲಿ ಸ್ಫೋಟಗೊಂಡಿದ ಹಿನ್ನಲೆ, ಔಷದ ತಯಾರಕ ಘಟಕದ ಕಟ್ಟಡ ಕೂಡ ಕುಸಿದು ಬಿದ್ದಿದ್ದು, ಸೋಷಿಯಲ್​ ಮೀಡಿಯಾನಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ಕಟ್ಟಡದ ಸುತ್ತಲು ಅವಶೇಷಗಳು ಸಂಗ್ರಹವಾಗಿರುವುದನ್ನು ಕಾಣಬಹುದಾಗಿದೆ.

ಘಟನೆಗೆ ಕಾರಣವೇನು?

ಸದ್ಯ ಈ ದುರ್ಘಟನೆ ಸಂಭವಿಸಲು ನಿಖರವಾದ ಕಾರಣ ಏನೆಂದು ಇಲ್ಲಿವರೆಗೂ ತಿಳಿದು ಬಂದಿಲ್ಲ ಎಂದು ಆಂಧ್ರಪ್ರದೇಶ ಪೊಲೀಸರು ತಿಳಿಸಿದ್ದು, ಮಾಹಿತಿ ದೊರೆತ ಕೂಡಲೇ, ಅಗ್ನಿಶಾಮಕ ಹಾಗೂ ಎನ್​ಡಿಆರ್​ಎಫ್​ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಅಪಘಾತಕ್ಕೆ ಒಳಗಾದವರ ರಕ್ಷಣೆ ನಮ್ಮ ಮೊದಲ ಗುರಿಯಾಗಿದೆ ಎಂದಿದ್ದಾರೆ.

ಆದರೆ, ಈ ಘಟನೆ ಕುರಿತು ತನಿಖೆ ನಡೆಸಲು ವಿಶೇಷ ತಂಡವೊಂದನ್ನು ರಚಿಸಲಾಗಿದ್ದು, ಅವರು ಔಷಧ ಘಟಕದ ಸಿಬ್ಬಂದಿಗಳ ವಿಚಾರಣೆ ನಡೆಸುತ್ತಿದ್ದು, ಕೆಲವೇ ಸಮಯದಲ್ಲಿ ವರದಿ ಲಭ್ಯವಾಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Also Read
ಇದೊಂದು ಭಯೋತ್ಪಾದಕ ಕೃತ್ಯ! ಪಾಕೆಟ್ ಚಾಕು ಅಲ್ಲ, ಕೊಡಲಿಯಿಂದ ದಾಳಿ; UAE ತನಿಖೆಯಲ್ಲಿ ಬಯಲಾದ ಸ್ಫೋಟಕ ಸತ್ಯವೇನು? UAE Investigation
Horrific boiler explosion in Tirupati: 5 dead, over 10 in critical condition.

ಮುಂದುವರಿದ ರಕ್ಷಣಾ ಕಾರ್ಯಚರಣೆ!

ಘಟನೆ ನಡೆಯುತ್ತಿದ್ದಂತೆ, ಪೊಲೀಸರು, ಅಗ್ನಿಶಾಮಕ ದಳ ಹಾಗೂ ತುರ್ತು ವಿಪತ್ತು ರಕ್ಷಣಾ ಪಡೆಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಚರಣೆಯನ್ನು ಮುಂದುವರಿಸಿದ್ದಾರೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, 5 ಜನ ಸ್ಥಳದಲ್ಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಹಾಗೆಯೇ ಹತ್ತಕ್ಕೂ ಅಧಿಕ ಜನರು ತೀವ್ರವಾಗಿ ಗಾಯಗೊಂಡಿದ್ದು, ಅವರು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಿ ತಿಳಿದು ಬಂದಿದೆ.

ಆದರೆ, ಬಾಯ್ಲರ್​ ಸ್ಫೋಟದಿಂದ ಕಟ್ಟಡ ಕುಸಿದ ಹಿನ್ನಲೆ, ಘಟಕದಲ್ಲಿ ನಿರ್ದಿಷ್ಟವಾಗಿ ಎಷ್ಟು ಜನ ಕೆಲಸ ಮಾಡುತ್ತಿದ್ದರು? ಹಾಗೂ ಅವಶೇಷಗಳ ಅಡಿಯಲ್ಲಿ ಯಾರಾದರೂ ಸಿಲುಕಿಕೊಂಡಿದ್ದಾರೋ? ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಕೆಲವೇ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಸ್ಥಳಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ, (ಏಜೆನ್ಸೀಸ್​).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net