ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ, ಖಾಸಗಿ ಮತ್ತು ಸರ್ಕಾರಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಿದ್ದಾತೆ. ಸುಮಾರು 41 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 15 ಮಂದಿ ಮೇಲೂರು ಜಿಎಚ್, ಸರ್ಕಾರಿ ರಾಜಾಜಿ ಆಸ್ಪತ್ರೆ ಮತ್ತು ಮಧುರೈನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮಧುರೈ ರೇಂಜ್ ಡಿಐಜಿ ಅಭಿನವ್ ಕುಮಾರ್, ಎಸ್ಪಿ ಮಧುರೈ ಎನ್ ದೇವನಾಥನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಾಗಿದೆ (ಏಜೆನ್ಸೀಸ್).