ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ಐವರು ದುರ್ಮರಣ!

 Accident
Accident
Published on
ಆಂಧ್ರಪ್ರದೇಶ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐದು ಜನರು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಕರ್ನೂಲ್​ ಜಿಲ್ಲೆಯ ಎಮ್ಮಿಗನೂರು ಮಂಡಲದ ಕೋಟೆಕಲ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಈ ಕುಟುಂಬಸ್ಥರು ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿಯ ದರ್ಶನ ಮುಗಿಸಿಕೊಂಡು ಊರಿನ ಕಡೆಗೆ ವಾಪಸ್​​​​ ಹಿಂತುರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net