ಭೀಕರ ರಸ್ತೆ ಅಪಘಾತ: ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಐಷರಾಮಿ ವೊಲ್ವೋ ಬಸ್: ಆರು ಸಾವು, 20 ಮಂದಿಗೆ ಗಾಯ | Accident

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ಅಹ್ಮದಾಬಾದ್: ಗುಜರಾತ್‌ನ ವಡೋದರಾದಲ್ಲಿ ಬುಧವಾರ(ಜೂ. 17) ಬೆಳಗಿನ ಜಾವ ನಿಂತಿದ್ದ ಟ್ರಕ್‌ಗೆ ಖಾಸಗಿ ಐಷರಾಮಿ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ(Accident) ಸಂಭವಿಸಿದ್ದು, ಪರಿಣಾಮ ಆರು ಮಂದಿ ಸಾವನ್ನಪ್ಪಿ, ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವಡೋದರಾ ಜಿಲ್ಲೆಯ ವಡೋದರಾ-ಹಲೋಲ್ ಹೆದ್ದಾರಿಯ ಕೋಟಂಬಿ ಗ್ರಾಮದ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಾಜಸ್ಥಾನದಿಂದ ಸೂರತ್‌ಗೆ ತೆರಳುತ್ತಿದ್ದ ಬಸ್, ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಸ್​ನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ರಾಜಸ್ಥಾನದವರು ಎನ್ನಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಜರೋದ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಮಾತನಾಡಿರುವ ವಡೋದರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಅಗರ್ವಾಲ್, ಟ್ರಕ್ ಚಾಲಕ ಟೈರ್ ಒತ್ತಡವನ್ನು ಪರಿಶೀಲಿಸುವ ಸಲುವಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾನೆ. ಈ ವೇಳೆ ವೇಗವಾಗಿ ಬಂದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಹೇಳಿದ್ದಾರೆ.
ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದರು, ಸುಮಾರು 20 ಜನರು ಗಾಯಗೊಂಡಿದ್ದಾರೆ. ಮತ್ತು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net