ಮನೆಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಸಜೀವ ದಹನ | House fire

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಇಂದು(ಡಿ. 22) ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.
ಜಾಯ್‌ಪುರ ಪೊಲೀಸ್ ಠಾಣೆ ಪ್ರದೇಶದ ಸೌರಿಯಾ ಗ್ರಾಮದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ದುರ್ಜೋಧನ್ ಡೊಲುಯಿ(72), ಅವರ ಮಗ ದೂಧಕುಮಾರ್ ಡೊಲುಯಿ(45), ಸೊಸೆ ಶಿಬಾನಿ ಡೊಲುಯಿ(40) ಹಾಗೂ ಮೊಮ್ಮಗಳು ಶಂಪಾ ಡೊಲುಯಿ(15) ಎಂದು ಗುರುತಿಸಲಾಗಿದೆ.
ಈ ಕುರಿತು ಮಾತನಾಡಿರುವ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಕುಚ್ಚಾ ಮನೆಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಎರಡು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿವೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಲುಬೇರಿಯಾದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net