ಪತ್ನಿ ಜೊತೆಗೆ ಗಲಾಟೆ; ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ | suicide
ಸಾಂದರ್ಭಿಕ ಚಿತ್ರ
Published on:
Copied
Follow Us
ಲಖನೌ: ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ವ್ಯಕ್ತಿಯೊಬ್ಬ ಹೆಂಡತಿಯೊಂದಿಗೆ ಜಗಳವಾಡಿದ ಬಳಿಕ, ತನ್ನ ಅಪ್ರಾಪ್ತ ಮಕ್ಕಳಿಗೆ ವಿಷವುಣಿಸಿ ಕೊಂದು, ಬಳಿಕ ತಾನೂ ಅದೇ ವಿಷ ಕುಡಿದು ಆತ್ಮಹತ್ಯೆ(suicide) ಮಾಡಿಕೊಂಡಿದ್ದಾನೆ ಎಂದು ಭಾನುವಾರ(ಡಿ. 07) ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಚಂದ್‌ಪುರ ವೃತ್ತ ಅಧಿಕಾರಿ (ಸಿಒ) ದೇಶದೀಪಕ್ ಸಿಂಗ್, ಬಾಬುರಾಮ್(28) ಎಂಬ ವ್ಯಕ್ತಿ ತನ್ನ ಪತ್ನಿ ಜೊತೆಗೆ ಜಗಳವಾಡಿದ ಬಳಿಕ ಮಗ ದೀಪಾಂಶು(5) ಮತ್ತು ಮಗಳು ಹರ್ಷಿಕಾ(3)ಳನ್ನು ಮುಬಾರಕ್‌ಪುರ ಖಾದರ್ ಗ್ರಾಮದ ಬಳಿಯ ಕಾಡಿಗೆ ಕರೆದೊಯ್ದಿದ್ದಾನೆ. ಅಲ್ಲಿ ಮೊದಲು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಸೇವಿಸಿದ್ದಾನೆ ಎಂದು ತಿಳಿಸಿದ್ದಾರೆ.
ಮಾಹಿತಿ ಬಂದ ಬಳಿಕ ಮೂವರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಪತಿ-ಪತ್ನಿಯ ನಡುವೆ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.
ಬಾಬುರಾಮ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮಕ್ಕಳ ಮೃತದೇಹಗಳನ್ನು ಅವರ ಕುಟುಂಬ ಸದಸ್ಯರು ಗ್ರಾಮಕ್ಕೆ ಕೊಂಡೊಯ್ದಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ ಎಂದಿದ್ದಾರೆ (ಏಜೆನ್ಸೀಸ್).