ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಇಡಿ ಅಧಿಕಾರಿಗಳ ವಿರುದ್ಧ ಬಂಗಾಳ ಪೊಲೀಸರು ದಾಖಲಿಸಿದ್ದ ಎಫ್​ಐಆರ್​ಗೆ ಸುಪ್ರೀಂ ತಡೆ | I-PAC Raid case

ಸಿಎಂ ಮಮತಾ ಬ್ಯಾನರ್ಜಿ
ಸಿಎಂ ಮಮತಾ ಬ್ಯಾನರ್ಜಿ
Published on
ನವದೆಹಲಿ: ಚುನಾವಣಾ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್(I-PAC) ಕಚೇರಿ ಮೇಲಿನ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್​ನಲ್ಲಿ ಹಿನ್ನಡೆಯಾಗಿದ್ದು, ಗುರುವಾರ(ಜ. 15) ಇಡಿ ಅಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್​ಐಆರ್​ಗೆ ತಡೆ ನೀಡಿದೆ..
ಅರ್ಜಿಯ ವಿಚಾರಣೆ ನಡೆಸಿದ  ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ವಿಪುಲ್ ಪಾಂಚೋಲಿ ನೇತೃತ್ವದ ದ್ವಿಸದಸ್ಯ ಪೀಠ, ಪ್ರಸ್ತುತ ಅರ್ಜಿಯೂ ಇಡಿ ಅಥವಾ ಕೇಂದ್ರ ತನಿಖಾ ಸಂಸ್ಥೆಗಳ ತನಿಖೆಗೆ ರಾಜ್ಯ ಸರ್ಕಾರದ ಹಸ್ತಕ್ಷೇಪಕ್ಕೆ ಸಂಬಂಧಿಸಿದಂತೆ ಗಂಭೀರ ಸಮಸ್ಯೆಯನ್ನು ಎತ್ತಿದೆ. ಇಡಿ ಎತ್ತಿರುವ ಮಸ್ಯೆಗಳನ್ನು ಪರಿಶೀಲಿಸದಿದ್ದರೆ ದೇಶದಲ್ಲಿ ಕಾನೂನುಬಾಹಿರತೆ ಉಂಟಾಗುತ್ತದೆ ಎಂದು ಹೇಳಿದೆ.
ಇಡಿ ಅಧಿಕಾರಗಳ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿರುವ ಎಫ್​ಐಆರ್​​ಗೆ ತಡೆ ನೀಡಿದ ಪೀಠ, ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಸಿಎಂ ಮಮತಾ ಬ್ಯಾನರ್ಜಿ ಮತ್ತು ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ​ ನೋಟಿಸ್ ಜಾರಿ ಮಾಡಿದೆ.
ಶೋಧನಾ ಸ್ಥಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ಉಪಸ್ಥಿತಿ, ದಾಖಲೆಗಳನ್ನು ವಶಪಡಿಸಿಕೊಳ್ಳುವಿಕೆ ತನ್ನ ಅಧಿಕಾರಿಗಳನ್ನು ಬೆದರಿಸುವ ಪರಿಣಾಮವಾಗಿದೆ. ಶಾಸನಬದ್ದವಾಗಿ ಕಾರ್ಯನಿರ್ವಹಿಸುವ ಸಂಸ್ಥೆಯ ಸಾಮರ್ಥ್ಯಕ್ಕೆ ಧಕ್ಕೆ ತರಲಾಗಿದೆ ಎಂದು ಇನ್ನೊಂದು ಅರ್ಜಿಯಲ್ಲಿ ಇಡಿ ಆರೋಪಿಸಿದ್ದು, ಇದನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದೆ. 
ಏತನ್ಮಧ್ಯೆ, ಶೋಧದ ಸಮಯದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ವಿಚಾರಣೆ ವೇಳೆ ವಾದವನ್ನು ಕೇಳದೇ ಯಾವುದೇ ಆದೇಶವನ್ನು ಹೊರಡಿಸಬಾರದು ಎಂದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net