ಮಣಿಪುರದಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿ ಬಂಡುಕೋರರಿಂದ ಐಇಡಿ ಬಾಂಬ್ ಸ್ಫೋಟ: ಇಬ್ಬರು ಯೋಧರು ಹುತಾತ್ಮ | IED blast

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಇಂಫಾಲ್​: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್​ನ ಯೋಧರ ಬೆಂಗಾವಲು ವಾಹನವನ್ನು ಗುರಿಯಾಗಿಸಿ ಬಂಡುಕೋರರು ನಡೆಸಿದ ಐಇಡಿ ಬಾಂಬ್ ಸ್ಪೋಟದಲ್ಲಿ(IED blast) ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸೋಮವಾರ(ಜು. 06) ವರದಿಯಾಗಿದೆ.
ಐಇಡಿ ಸ್ಪೋಟದಿಂದ ಸೇನಾ ವಾಹನ ಸಂಪೂರ್ಣ ನಾಶವಾಗಿದೆ. ಗಾಯಾಳು ಯೋಧರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಯ ನಂತರ ಭದ್ರತಾ ಪಡೆಗಳು ತಕ್ಷಣವೇ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿವೆ. ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
ಇನ್ನೂ ಘಟನೆಯನ್ನು ಖಂಡಿಸಿರುವ ಮಣಿಪುರ ಮುಖ್ಯಮಂತ್ರಿ ಯುಮ್ನಾಮ್ ಖೇಮ್ಚಂದ್ ಸಿಂಗ್, ಮೃತರ ಕುಟುಂಬಗಳಿಗೆ ಅವರು ತಮ್ಮ ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ಕಾರ ಇಂತಹ ಕ್ರೂರ ಹಿಂಸಾಚಾರವನ್ನು ಸಹಿಸುವುದಿಲ್ಲ. ಘಟನೆಗೆ ಕಾರಣರಾದವರನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಲಾಗುವುದು ಎಂದು ಹೇಳಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net