ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರಿಟ್ಟಿದ್ದ ಐಇಡಿ ಸ್ಫೋಟ; 11 ಭದ್ರತಾ ಸಿಬ್ಬಂದಿಗೆ ಗಾಯ | IED explodes

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ರಾಯ್​​ಪುರ: ಛತ್ತೀಸ್​ಗಢದ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರು ಇರಿಸಿದ್ದ ಐಇಡಿ ಸ್ಫೋಟಗೊಂಡು 11 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೋಮವಾರ(ಜ. 26) ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಭಾನುವಾರ ಕೂಂಬಿಂಗ್​ ಕಾರ್ಯಾಚರಣೆ ವೇಳೆ ಕರ್ರೆಗುಟ್ಟ ಬೆಟ್ಟಗಳ ಕಾಡುಗಳಲ್ಲಿ ಸ್ಫೋಟಗಳು ಸಂಭವಿಸಿವೆ. ಘಟನೆಯಲ್ಲಿ 10 ಡಿಆರ್​ಜಿ ಸಿಬ್ಬಂದಿ, ಓರ್ವ ಸಿಆರ್​ಪಿಎಫ್​ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಗಾಯಗೊಂಡ ಕೋಬ್ರಾ ಸಿಬ್ಬಂದಿ ರುದ್ರೇಶ್ ಸಿಂಗ್ 210ನೇ ಬೆಟಾಲಿಯನ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದಾರೆ ಎನ್ನಲಾಗಿದೆ. ಸಿಂಗ್ ಮತ್ತು ಇಬ್ಬರು ಡಿಆರ್‌ಜಿ ಸಿಬ್ಬಂದಿಯ ಕಾಲುಗಳಿಗೆ ಗಾಯಗಳಾಗಿದ್ದು, ಇತರ ಮೂವರ ಕಣ್ಣುಗಳಿಗೆ ಗಾಯಗಳಾಗಿವೆ. ರಾಯ್​ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ ನಕ್ಸಲರ ನಾಯಕ ಸುರಕ್ಷಿತ ತಾಣ ಎಂದು ಭಾವಿಸಿದ್ದ ಕರ್ರೆಗುಟ್ಟಾದ ಉಸೂರ್ ಪೊಲೀಸ್ ಠಾಣೆ ವ್ಯಾಪ್ತಿಯ ತಡ್ಪಲ ಎಂಬ ಗ್ರಾಮದಲ್ಲಿ ಕಳೆದ ವರ್ಷ ನವೆಂಬರ್​ನಲ್ಲಿ ಭದ್ರತಾ ಪಡೆಗಳು ಬೀಡುಬಿಟ್ಟಿದ್ದವು. ಅದಕ್ಕೂ ಮುಂಚೆ ಏಪ್ರಿಲ್ -ಮೇ ತಿಂಗಳಲ್ಲಿ ಸುಮಾರು 21 ದಿನಗಳ ಕಾಲ ಕಾರ್ಯಾಚರಣೆ ನಡೆಸಿ 31 ನಕ್ಸಲರನ್ನು ಹೊಡೆದುರುಳಿಸಿದ್ದವು ಎಂದು ವರದಿಗಳು ಉಲ್ಲೇಖಿಸಿವೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net