

ನವದೆಹಲಿ: ಇತ್ತೀಚೆಗೆ ನಡೆದ ರಷ್ಯಾ, ಅಮೆರಿಕ ಮತ್ತು ಚೀನಾ ದಿಗ್ಗಜ ನಾಯಕರ ನಡುವಿನ ಹೈ ಪ್ರೊಫೈಲ್ ಸಭೆಯ ಫೋಟೋ ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನು ಗುರಿಯಾಗಿಸಿ ರಾಜಿಯಾದ ಪ್ರಧಾನಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಭಾರತದ ಪ್ರಧಾನಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮೇಜಿನ ಬಳಿ ಕುಳಿತುಕೊಳ್ಳುತ್ತಿದ್ದರು ಎಂದು ಪೋಸ್ಟ್ ಹಾಕಿದ್ದಾರೆ.
ತಮ್ಮ ಎಕ್ಸ್ನಲ್ಲಿ ಟ್ರಂಪ್, ಪುಟಿನ್ ಹಾಗೂ ಕ್ಸಿ ಸಭೆಯಲ್ಲಿರುವ ಫೋಟೋ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ, ಭಾರತದ ಪ್ರಧಾನಿ ಈ ಮೇಜಿನ ಬಳಿ ಕುಳಿತುಕೊಳ್ಳುತ್ತಿದ್ದರು. ರಾಜಿ ಮಾಡಿಕೊಂಡ ಪ್ರಧಾನಿ ಎಂದಿಗೂ ಈ ಮೇಜಿನ ಬಳಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ.
ಚೀನಾದ ತಂತ್ರಜ್ಞಾನ ಕೇಂದ್ರವಾದ ಶೆನ್ಜೆನ್ನಲ್ಲಿರುವ ವಿಲ್ಲಾವೊಂದರಲ್ಲಿ ಟ್ರಂಪ್, ಕ್ಸಿ ಮತ್ತು ಪುಟಿನ್ ಅವರ ನಡುವೆ ಈ ಸಭೆ ನಡೆದಿದೆ. ಸಭೆಯಲ್ಲಿ ಮೂರು ದೇಶಗಳು ವಿಶ್ವಸಂಸ್ಥೆಯಲ್ಲಿ ಸುಧಾರಣೆಗಳತ್ತ ಕೆಲಸ ಮಾಡಲು, ತೈಲ ಪೂರೈಕೆಯನ್ನು ಹೆಚ್ಚಿಸಲು ಮತ್ತು ಪರಮಾಣು ಅಪಾಯಗಳನ್ನು ಕಡಿಮೆ ಮಾಡಲು ಒಪ್ಪಿಕೊಂಡಿವೆ (ಏಜೆನ್ಸೀಸ್).