ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನತಾ ಪಾರ್ಟಿ (BJP) ನಡುವಿನ ಸಂಬಂಧವನ್ನು ಅತ್ಯಂತ ತೀಕ್ಷ್ಣವಾದ ಪದಗಳಲ್ಲಿ ವಿಶ್ಲೇಷಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge), ಬಿಜೆಪಿ ವಿರುದ್ಧ ಭಾರಿ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ ಎಂದು ಲೇವಡಿ ಮಾಡಿರುವ ಗೃಹ ಸಚಿವ, ಬಿಜೆಪಿಯು ಕೇವಲ ಆರ್ಎಸ್ಎಸ್ನ ರಾಜಕೀಯ ಸಾಧನವಾಗಿ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.