ಮುಂದುವರೆದು ಮಾತನಾಡಿದ ಷಾ, ಸೋಮವಾರ ಲೋಕಸಭೆಯಲ್ಲಿ ವಂದೇ ಮಾತರಂ ಕುರಿತು ಚರ್ಚೆಗಳು ನಡೆಯುತ್ತಿದ್ದಾಗ ಗಾಂಧಿ ಕುಟುಂಬದ ಇಬ್ಬರೂ ಸದಸ್ಯರು ಸದನದಲ್ಲಿ ಇರಲಿಲ್ಲ ಎಂದು ಹೇಳಿದರು. ಅಲ್ಲದೆ, ನಿನ್ನೆ ಲೋಕಸಭೆಯಲ್ಲಿ ಚರ್ಚೆಗಳು ನಡೆದಾಗ, ಗಾಂಧಿ ಕುಟುಂಬದ ಇಬ್ಬರೂ ಸದಸ್ಯರು ಸದನಕ್ಕೆ ಗೈರುಹಾಜರಾಗಿದ್ದರು. ಜವಾಹರಲಾಲ್ ನೆಹರೂ ಅವರಿಂದ ಹಿಡಿದು ಪ್ರಸ್ತುತ ನಾಯಕತ್ವದವರೆಗೆ, ಕಾಂಗ್ರೆಸ್ ವಂದೇ ಮಾತರಂ ಅನ್ನು ವಿರೋಧಿಸುತ್ತಲೇ ಇದೆ ಎಂದು ಗಾಂಧಿ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.