ಗಂಗಾ ನದಿಯಲ್ಲಿ ಇಪ್ತಾರ್ ಕೂಟ ಆಯೋಜನೆ; ಮಾಂಸಾಹಾರ ಸೇವಿಸಿ ಅಪವಿತ್ರಗೊಳಿಸಿದ ಆರೋಪ; 14 ಮಂದಿ ಬಂಧನ | Ganga river

ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು
Published on
ಲಖನೌ: ಉತ್ತರ ಪ್ರದೇಶದ ಹಿಂದೂ ಧಾರ್ಮಿಕ ಕ್ಷೇತ್ರವಾದ ವಾರಣಾಸಿಯ ಗಂಗಾ ನದಿಯಲ್ಲಿ(Ganga river) ದೋಣಿಯಲ್ಲಿಯೇ ಇಪ್ತಾರ್ ಕೂಟ ಆಯೋಜಿಸಿ, ಮಾಂಸಾಹಾರ ಸೇವಿಸಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬುಧವಾರ(ಮಾ. 18) ವರದಿಯಾಗಿದೆ.
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಗಂಗಾ ನದಿಯಲ್ಲಿ ದೋಣಿಯಲ್ಲಿ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಚಿಕನ್ ಬಿರಿಯಾನಿ ತಿನ್ನುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರೆಲ್ ಆಗಿದೆ. ವಾರಣಾಸಿ ನಗರ ಬಿಜೆಪಿ ಯುವಮೋರ್ಚ್ ಘಟಕದ ಅಧ್ಯಕ್ಷ ರಜತ್ ಜೈಸ್ವಾಲ್ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. 
ಹಿಂದೂ ಧಾರ್ಮಿಕ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ್ದು ಮತ್ತು ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಿದ ಆರೋಪದ ಮೇಲೆ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾತನಾಡಿರುವ ಜೈಸ್ವಾಲ್, ಗಂಗಾ ನದಿ ಸನಾತನ ಧರ್ಮದ ಅನುಯಾಯಿಗಳ ಪವಿತ್ರವಾದ ನದಿ. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದ ಸಾವಿರಾರು ಭಕ್ತರು ಪ್ರತಿದಿನ ಕಾಶಿಗೆ ಭೇಟಿ ನೀಡಿ ಗಂಗಾ ನೀರನ್ನು ಬಳಸಿಕೊಂಡು ಧಾರ್ಮಿಕ ವಿಧಿಗಳನ್ನು ಮತ್ತು ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಅಂತಹ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಬಿರಿಯಾನಿ ಸೇವಿಸಿ ಉಳಿದ ಭಾಗವನ್ನು ನೀರಿಗೆ ಎಸೆದು ಅಪಚಾರ ಮಾಡಲಾಗಿದೆ. ಹಿಂದೂಗಳ ಭಾವನೆಗೆ ನೋವುಂಟು ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ವಾರಣಾಸಿ ಎಸಿಪಿ ವಿಜಯ್ ಪ್ರತಾಪ್ ಸಿಂಗ್ ಮಾತನಾಡಿದ್ದು, ಸೋಮವಾರ ಸೋಷಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ವೈರಲ್ ಆಗಿದ್ದು, ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ನಡೆಸುತ್ತಿರುವ ಜನರ ಗುಂಪೊಂದು ಬಿರಿಯಾನಿ ಸೇವಿಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net