ಮಂಗಳವಾರ ನಡೆದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಿಲ್ ಕುಮಾರ್ ರಸ್ತೋಗಿ ಅವರಲ್ಲದೆ ಟೆನಿಸ್ ದಂತಕಥೆ ವಿಜಯ್ ಅಮೃತರಾಜ್, ಹಿರಿಯ ನಟರಾದ ಮಮ್ಮುಟ್ಟಿ, ಸತೀಶ್ ಶಾ, ಭಾರತ ಕ್ರಿಕೆಟ್ ತಂಡದ ದಿಗ್ಗಜ ಕ್ರಿಕೆಟಿಗ ರೋಹಿತ್ ಶರ್ಮಾ ಮತ್ತು ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಸೇರಿದಂತೆ ಹಲವು ಗಣ್ಯರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಈ ವರ್ಷದ ಗಣರಾಜ್ಯೋತ್ಸವದ ಮುನ್ನಾದಿನದಂದು ಕೇಂದ್ರ ಸರ್ಕಾರ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಿತ್ತು. ಮೇ 25 ರಂದು ನಡೆದ ಮೊದಲ ಸಮಾರಂಭದಲ್ಲಿ 65 ಪ್ರಶಸ್ತಿಗಳನ್ನು ನೀಡಲಾಗಿದ್ದು, ಉಳಿದ 65 ಪ್ರಶಸ್ತಿಗಳನ್ನು ಮಂಗಳವಾರ ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ಪ್ರದಾನ ಮಾಡಲಾಯಿತು(ಏಜೆನ್ಸೀಸ್).