ನಾಳೆ ಕರಾವಳಿ, ದಕ್ಷಿಣ ಭಾರತದ ಈ ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ! ಹವಾಮಾನ ಇಲಾಖೆ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
Published on

ಪ್ರಮುಖ ಮುಖ್ಯಾಂಶಗಳು

  • ನಾಳೆ ಕರಾವಳಿ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ
  • ಭಾರತದಲ್ಲಿ ಬಿರುಸಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ನವದೆಹಲಿ: ಭಾರತದಲ್ಲಿ ಮುಂಗಾರು ವಾಡಿಕೆಯಂತೆ ಪ್ರವೇಶ ಮಾಡದಿರುವುದು ಸದ್ಯ ಭೀಕರ ಬರಗಾಲದ ಭೀತಿಯನ್ನು ಹುಟ್ಟುಹಾಕಿದೆ (IMD Alert). ಕರಾವಳಿ, ಮಲೆನಾಡು ಮತ್ತು ಉತ್ತರ ಭಾರತದ ಭಾಗಗಳಲ್ಲಿ ಧಾರಕಾರ ಅಥವಾ ಬಿರುಸಿನ ಬದಲಿಗೆ ಸಾಧಾರಣ ಮಳೆಯಾಗುತ್ತಿದೆ. ಹೀಗಿರುವಾಗಲೇ, ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದ ದಕ್ಷಿಣ ಕನ್ನಡ, ಮುಂಬೈ ಸೇರಿದಂತೆ ಕೆಲವೆಡೆ ಜೋರು ಮಳೆಯಾಗುತ್ತಿದ್ದು, ಇದರ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ರಾಜ್ಯಗಳಿಗೆ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಿದೆ.

ಜು.05ರಂದು ಈ ರಾಜ್ಯಗಳಲ್ಲಿ ಬಿರುಸಿನ ಮಳೆ

ಸೌರಾಷ್ಟ್ರ ಮತ್ತು ಕಛ್, ಒಡಿಶಾ, ಕೊಂಕಣ ಮತ್ತು ಗೋವಾ, ಗುಜರಾತ್ ಮತ್ತು ಮಧ್ಯ ಮಹಾರಾಷ್ಟ್ರದ ಪ್ರತ್ಯೇಕ ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ 204.4 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಸೂಚಿಸಿದೆ. ಪಶ್ಚಿಮ ಹಾಗೂ ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ರಾಜಸ್ಥಾನ, ಉತ್ತರಾಖಂಡ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಮುಂದಿನ 7 ದಿನಗಳು

ಮುಂದಿನ ಏಳು ದಿನಗಳಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ನಿರೀಕ್ಷೆಯಂತೆ ಮಳೆ ಸುರಿಯಲಿದ್ದು, ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ವಾಯುವ್ಯ ಭಾರತದಲ್ಲಿ, ಜು.4ರಿಂದ 10 ರವರೆಗೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಾಫರಾಬಾದ್ ಮತ್ತು ಉತ್ತರಾಖಂಡ್ ಮತ್ತು ಜು.5ರಿಂದ 10 ರವರೆಗೆ ಹಿಮಾಚಲ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
ಜು.8ರಿಂದ 10 ರವರೆಗೆ ಪಶ್ಚಿಮ ಉತ್ತರ ಪ್ರದೇಶ ಮತ್ತು ಜು.7ರಿಂದ 10 ರವರೆಗೆ ಪೂರ್ವ ಉತ್ತರ ಪ್ರದೇಶದಲ್ಲಿ ಬಾರಿ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ದಿನಗಳಲ್ಲಿ ಈ ಪ್ರದೇಶದ ಹಲವಾರು ಭಾಗಗಳಲ್ಲಿ ಪ್ರತ್ಯೇಕ ಅಥವಾ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಜು.4ರಿಂದ 10 ರವರೆಗೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್‌ನಲ್ಲಿ ಗುಡುಗು ಸಹಿತ ಮಳೆ ಸುರಿಯಲಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳು ಹೆಚ್ಚಿವೆ ಎಂದು ತಿಳಿಸಲಾಗಿದೆ.
ಇನ್ನು, ರಾಜಸ್ಥಾನ, ಹರಿಯಾಣ, ಛಂಡೀಗಢ, ದೆಹಲಿ ಮತ್ತು ಪಂಜಾಬ್‌ನಲ್ಲೂ ಇದೇ ರೀತಿಯ ಪರಿಸ್ಥಿತಿ ಕಂಡುಬರಲಿದ್ದು, ಉತ್ತರಾಖಂಡವು ವಾರವಿಡೀ ಗುಡುಗು ಸಹಿತ ಮಳೆಯನ್ನು ನಿರೀಕ್ಷಿಸಬಹುದು. ಜುಲೈ 4ರಿಂದ 5ರಂದು ಮತ್ತು ಜು.8ರಿಂದ 10ರಂದು ಮತ್ತೆ ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜು.6 ಮತ್ತು 7ರಂದು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ, ಜು.4ರಿಂದ 10ರ ಉದ್ದಕ್ಕೂ ಉತ್ತರಾಖಂಡದಲ್ಲಿ ಬಿರುಸಿನ ವರುಣಾರ್ಭಟ ಸಾಧ್ಯತೆಯಿದೆ ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ,(ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net