ವಿಮಾನ ಸಾರಿಗೆ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 1981ರ ಅಡಿಯಲ್ಲಿ ಬರಲಿದ್ದು ಅಗತ್ಯ ಸೇವೆಯ ಮಾನ್ಯತೆ ಇದ್ದರೂ, ದರ ನಿಗದಿಗೆ ಪರಿಣಾಮಕಾರಿ ನಿಯಂತ್ರಣ ವ್ಯವಸ್ಥೆ ಇಲ್ಲ. ಉಚಿತ ಸರಕು ಮಿತಿಯನ್ನು ಕಡಿಮೆ ಮಾಡಿ ಹೆಚ್ಚುವರಿ ಶುಲ್ಕ ವಿಧಿಸುವುದನ್ನೂ ಪ್ರಶ್ನಿಸಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ದರ ನಿಯಂತ್ರಣ ಮಾರ್ಗಸೂಚಿ ರೂಪಿಸಬೇಕು.