ಕಾನ್ಸಟ್ಯೂಷನ್ ಕ್ಲಬ್ನಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಡಿಎಂಕೆ, ಎಎಪಿ ಹೊರತುಪಡಿಸಿ ಉಳಿದ ಎಲ್ಲಾ ವಿಪಕ್ಷಗಳ ನಾಯಕರು ಹಾಜರಾಗಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ತೇಜಸ್ವಿ ಯಾದವ್, ಉದ್ಧವ್ ಠಾಕ್ರೆ, ಸುಪ್ರಿಯಾ ಸುಳೆ ಸೇರಿ ಹಲವು ನಾಯಕರು ಭಾಗವಹಿಸಿದ್ದರು.