ಚುನಾವಣೆ ಆಯೋಗ ನಡೆಸುತ್ತಿರುವ SIR ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸಿಜೆಐಗೆ ಇಂಡಿಯಾ ಮೈತ್ರಿಕೂಟ ಪತ್ರ: ಆಪ್​, ಡಿಎಂಕೆ ಸಹ ಬೆಂಬಲ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ನವದೆಹಲಿ: ಚುನಾವಣಾ ಆಯೋಗದಿಂದ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಇತರ ಉಪಚುನಾವಣೆಗೆ ಚುನಾವಣೆಗೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಮಂಗಳವಾರ(ಜೂ. 30) ಸುಪ್ರೀಂಕೋರ್ಟ್​ನ ಸಿಜೆಐ ಸೂರ್ಯಕಾಂತ್ ಅವರಿಗೆ ಇಂಡಿಯಾ ಮೈತ್ರಿಕೂಟದ ಪಕ್ಷದ ನಾಯಕರು ಪತ್ರ ಬರೆದಿದ್ದು, ಅದಕ್ಕೆ ಡಿಎಂಕೆ ಮತ್ತು ಆಪ್ ​ಬೆಂಬಲ ನೀಡಿವೆ.
ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ನೀಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 2026 ಜೂನ್ 8ರಂದು ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 21 ರಾಜಕೀಯ ಪಕ್ಷಗಳು ಮತ್ತು ಒಬ್ಬ ಸ್ವತಂತ್ರ ಸದಸ್ಯರು ಭಾಗವಹಿಸಿದ್ದರಯ. ಈ ವೇಳೆ ಭಾರತೀಯ ಚುನಾವಣಾ ಆಯೋಗದ SIR ಪ್ರಕ್ರಿಯೆ ಮತ್ತು ಚುನಾವಣೆಗಳಿಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ಸಿಜೆಐ ಅವರಿಗೆ ಪತ್ರ ಬರೆಯುವಂತೆ ನಿರ್ಣಯಕೈಗೊಳ್ಳಲಾಗಿತ್ತು.
ಅದರ ಪ್ರಕಾರ, ಇಂದು 23 ಪಕ್ಷಗಳು ಮತ್ತು ಸ್ವತಂತ್ರ ಸಂಸದರು ಸಹಿ ಮಾಡಿದ ಪತ್ರವನ್ನು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಕಳುಹಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ಅಖಿಲೇಶ್ ಯಾದವ್, ಹೇಮಂತ್ ಸೊರೆನ್, ಒಮರ್ ಅಬ್ದುಲ್ಲಾ, ಕಪಿಲ್ ಸಿಬಲ್ ಮತ್ತು ಡೆರೆಕ್ ಒ'ಬ್ರೇನ್ ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಜೊತೆಗೆ ಆಪ್​ ಮತ್ತು ಡಿಎಂಕೆ ಪಕ್ಷಗಳು ಸಹ ಪತ್ರಕ್ಕೆ ಸಹಿ ಹಾಕಿವೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಾಗಿವೆ ಎಂದಿದ್ದಾರೆ,
ಇನ್ನೂ ಪತ್ರದಲ್ಲಿ ವಿಪಕ್ಷಗಳನಾಯಕರು, ಕೇಂದ್ರದಲ್ಲಿರುವ ಎಲ್ಲಾ ವ್ಯವಸ್ಥೆಗಳು ವಿಫಲವಾದಾಗ, ಭಾರತೀಯ ಪ್ರಜಾಪ್ರಭುತ್ವ ನ್ಯಾಯಾಂಗ ವ್ಯವಸ್ಥೆಯಲ್ಲಿ ಆಶ್ರಯ ಪಡೆಯುತ್ತದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ದೇಶದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನ್ಯಾಯಾಂಗವು ಗಮನದಲ್ಲಿಟ್ಟುಕೊಂಡು ಪರಿಸ್ಥಿತಿಯನ್ನು ನೋಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net