ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ನಾಹಿದ್ ಇಸ್ಲಾಂ, ಭಾರತದಲ್ಲಿ ಚುನಾವಣೆ ನಡೆಯುವ ಮುನ್ನ ಮತ್ತು ನಂತರದ ಸಂದರ್ಭಗಳಲ್ಲಿ ಸುವೇಂದು ಅವರು ಸತತವಾಗಿ ಬಾಂಗ್ಲಾದೇಶದ ವಿರುದ್ಧ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಬಾಂಗ್ಲಾದೇಶವನ್ನು ಸೃಷ್ಟಿಸಿದ್ದೇ ನಾವು ಎಂದು ಅವರು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಇಲ್ಲಿ ಯಾರಾದರೂ ಮಾತನಾಡಿದರೆ ಅವರನ್ನು ಅಕ್ರಮ ನುಸುಳುಕೋರರು ಎಂದು ಕರೆದು ಬಾಂಗ್ಲಾದೇಶಕ್ಕೆ ಅಟ್ಟಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.