ದೇಶದ ಆರ್ಥಿಕ ಪ್ರಗತಿಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭಾರತವು ಈಗ ರಿಫಾರ್ಮ್ ಎಕ್ಸ್ಪ್ರೆಸ್ ವೇಗದಲ್ಲಿ ಚಲಿಸುತ್ತಿದೆ. ಕಳೆದ ಕೆಲವು ವರ್ಷಗಳಲ್ಲಿ ನಾವು ಜಾರಿಗೆ ತಂದ ಸುಧಾರಣೆಗಳು ಇಂದು ಫಲ ನೀಡುತ್ತಿವೆ ಎಂದರು. ಸಂಸತ್ತಿನಲ್ಲಿ ಸಕಾರಾತ್ಮಕ ಶಕ್ತಿಯನ್ನು ನೀಡುತ್ತಿರುವ ಎಲ್ಲಾ ಸಂಸದರಿಗೂ ಈ ಸಂದರ್ಭದಲ್ಲಿ ಪ್ರಧಾನಿ ಧನ್ಯವಾದ ಅರ್ಪಿಸಿದ್ದಾರೆ.