ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿನ ವಿಚಾರದಲ್ಲಿ ಈ ಹಿಂದೆ ಕಿಣಿ ಭವಿಷ್ಯ ಸಾಕಷ್ಟು ಸದ್ದು ಮಾಡಿತ್ತು. 2025, ನವೆಂಬರ್ 8ರಂದು ಜ್ಯೋತಿಷಿ ಪ್ರಶಾಂತ್ ಕಿಣಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಒಂದು ಪೋಸ್ಟ್ ಮಾಡಿದ್ದರು. ಆ ಪೋಸ್ಟ್ನಲ್ಲಿ ಏನಿತ್ತು ಅಂದರೆ, ಒಮ್ಮೆ ಮುಖ್ಯಮಂತ್ರಿ ಅಥವಾ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ ಕೆಲವು ಭಾರತೀಯ ಅನುಭವಿ ರಾಜಕಾರಣಿಗಳು ಡಿಸೆಂಬರ್ 2025 ರಿಂದ ಫೆಬ್ರವರಿ 2026 ರ ನಡುವೆ ನಿಧನರಾಗಬಹುದು ಎಂದು ಬರೆಯಲಾಗಿತ್ತು. ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿನ ಬೆನ್ನಲ್ಲೇ ತಮ್ಮ ಭವಿಷ್ಯ ನಿಜವಾಯಿತು ಎಂದು ಪ್ರಶಾಂತ್ ಕಿಣಿ ಅವರು ಹೇಳಿಕೊಂಡಿದ್ದಾರೆ. 2025ರ ಡಿಸೆಂಬರ್ನಿಂದ 2026ರ ಫೆಬ್ರವರಿ ನಡುವೆ ಓರ್ವ ಹಿರಿಯ ರಾಜಕಾರಣಿ ಸಾಯುತ್ತಾರೆ ಎಂದು ನಾನು ಭವಿಷ್ಯ ನುಡಿದಿದ್ದೆ. ಇದೀಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾದರು ಎಂದು ಇತ್ತೀಚಿನ ಪೋಸ್ಟ್ನಲ್ಲಿ ಪ್ರಶಾಂತ್ ಕಿಣಿ ಬರೆದುಕೊಂಡಿದ್ದರು. ಇದು ಭಾರಿ ಚರ್ಚೆಗೆ ಗ್ರಾಸವಾಯಿತು. ಅಂದಹಾಗೆ, ಜನವರಿ 28ರ ಬೆಳಗ್ಗೆ ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ಲಘು ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾದರು, (ಏಜೆನ್ಸೀಸ್).